ಧರ್ಮೋಪದೇಶಕಾಂಡ 30:1 - ಕನ್ನಡ ಸಮಕಾಲಿಕ ಅನುವಾದ1 ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿ ಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಸುವಿರಿ. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.