Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ಹೇಳಿದಂತೆ ನೀವು ನಡೆದುಕೊಳ್ಳಬೇಕು. ಈ ಧರ್ಮೋಪದೇಶ ಪುಸ್ತಕದಲ್ಲಿ ಬರೆದಿರುವ ಬೋಧನೆಗಳನ್ನು ನೀವು ಅನುಸರಿಸಬೇಕು. ನಿಮ್ಮ ಪೂರ್ಣಪ್ರಾಣದಿಂದಲೂ ಪೂರ್ಣಆತ್ಮದಿಂದಲೂ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬೇಕು; ಆಗ ನಿಮಗೆ ಈ ಎಲ್ಲಾ ಒಳ್ಳೆಯ ಸಂಗತಿಗಳು ಸಂಭವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:10
17 ತಿಳಿವುಗಳ ಹೋಲಿಕೆ  

ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.


ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.


ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.


ಆದರೆ ನೀವು ಪುನಃ ಯೆಹೋವ ದೇವರ ಮಾತನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳಂತೆ ನಡೆಯುವಿರಿ.


ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು, ನೀವೂ, ನಿಮ್ಮ ಮಕ್ಕಳೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾತುಗಳಿಗೆ, ನೀವು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ದೇವರಿಗೆ ವಿಧೇಯರಾಗಬೇಕು.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಆದರೆ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ ಅವನು ಅವುಗಳಿಂದ ಉಳಿಯುವನು.


ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


“ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು.


ಈ ನಿಯಮದ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಯೆಹೋವ ದೇವರು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವರು.


ನಿಶ್ಚಯವಾಗಿ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯು ನಿಮಗೆ ಕಠಿಣವಾದದ್ದಲ್ಲ; ದೂರವಾದದ್ದೂ ಅಲ್ಲ.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು