Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:17 - ಕನ್ನಡ ಸಮಕಾಲಿಕ ಅನುವಾದ

17 ಆದರೆ ನಿಮ್ಮ ಹೃದಯವು ತಿರುಗಿಬಿದ್ದು ನೀವು ಮಾತು ಕೇಳದೆ ಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆದವರಾಗಿ ಅಡ್ಡಬಿದ್ದು, ಅವುಗಳಿಗೆ ಸೇವೆ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ ಇತರ ದೇವರುಗಳನ್ನು ಪೂಜಿಸಿ ಸೇವಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆಮಾಡಲು ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:17
16 ತಿಳಿವುಗಳ ಹೋಲಿಕೆ  

ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.


ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.


ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.


ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು.


ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.


ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಬಾಳದೆ, ನಾಶವಾಗಿಹೋಗುವಿರಿ ಎಂದು ಈ ಹೊತ್ತು ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.


ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.


ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,


ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು