Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:19 - ಕನ್ನಡ ಸಮಕಾಲಿಕ ಅನುವಾದ

19 ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:19
33 ತಿಳಿವುಗಳ ಹೋಲಿಕೆ  

ನೋಡಿರಿ, ನಾನು ಈ ಹೊತ್ತು ಜೀವ ಸಮೃದ್ಧಿಯನ್ನೂ, ಮರಣ ನಾಶನವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ನಾನು ಈ ಹೊತ್ತು ಆಶೀರ್ವಾದವನ್ನೂ, ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.


ನಂಬಿಗಸ್ತಿಕೆಯ ಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಾನು ನಿಮ್ಮ ನಿಯಮಗಳ ಮೇಲೆ ನನ್ನ ಹೃದಯವನ್ನಿಟ್ಟುಕೊಂಡಿದ್ದೇನೆ.


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.


ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ.


ನಾನು ನಿಮ್ಮ ಸೂತ್ರಗಳನ್ನು ಆರಿಸಿಕೊಂಡಿರುವುದರಿಂದ, ನಿಮ್ಮ ಕೈ ನನಗೆ ನೆರವಾಗಲಿ.


ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ, ನಿಮ್ಮ ಅಧಿಕಾರಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ಆಗ ಈ ಮಾತುಗಳನ್ನು ಅವರು ಕೇಳುವ ಹಾಗೆ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.


ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.


ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.


ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಸಬ್ಬತ್ ದಿನವನ್ನು ಕೈಗೊಂಡು, ನನಗೆ ಮೆಚ್ಚಿಗೆಯಾದದ್ದನ್ನು ಆಯ್ದುಕೊಂಡು, ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವ ನಪುಂಸಕರಿಗೆ,


ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.


“ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.


ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,


ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು.


ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.


ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.


ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು