Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:6 - ಕನ್ನಡ ಸಮಕಾಲಿಕ ಅನುವಾದ

6 ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೇ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:6
24 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ಯೇಸು ಅವನಿಗೆ, “ ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.


ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.


ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು