Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಆ ಶಾಪಗಳನ್ನೆಲ್ಲಾ ನಿಮ್ಮ ಶತ್ರುಗಳ ಮೇಲೆಯೂ, ನಿಮ್ಮನ್ನು ಹಿಂಸಿಸಿದ ನಿಮ್ಮ ಹಗೆಯವರ ಮೇಲೆಯೂ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ದೇವರಾದಸರ್ವೇಶ್ವರ ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ, ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಿಮ್ಮ ದೇವರಾದ ಯೆಹೋವನು ಕೆಟ್ಟಸಂಗತಿಗಳೆಲ್ಲಾ ನಿಮ್ಮ ವೈರಿಗಳಿಗೆ ಆಗುವಂತೆ ಮಾಡುವನು. ಯಾಕೆಂದರೆ ಅವರು ನಿಮ್ಮನ್ನು ದ್ವೇಷಿಸಿ ತೊಂದರೆ ಕೊಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:7
28 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ, ಅದನ್ನು ನಿನಗೆ ತಿಳಿಸುವೆನು,” ಎಂದನು.


ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.


ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಹಿಂಸಾಕೃತ್ಯಗಳ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚುವುದು. ನೀನು ಎಂದೆಂದಿಗೂ ನಾಶವಾಗಿ ಹೋಗುವೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.


ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,


ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ


ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.


ಆದರೆ ನೀವು ಪುನಃ ಯೆಹೋವ ದೇವರ ಮಾತನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳಂತೆ ನಡೆಯುವಿರಿ.


ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”


“ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು