ಧರ್ಮೋಪದೇಶಕಾಂಡ 31:12 - ಕನ್ನಡ ಸಮಕಾಲಿಕ ಅನುವಾದ12 ಜನರನ್ನು ಅಂದರೆ, ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಪರದೇಶಿಯರನ್ನೂ ಕೂಡಿಸಬೇಕು. ಅವರು ಕೇಳಿ ಕಲಿತು, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಈ ನಿಯಮದ ವಾಕ್ಯಗಳನ್ನೆಲ್ಲಾ ಕೈಗೊಂಡು ನಡೆಯುವ ಹಾಗೆ, ಅವರೆಲ್ಲರನ್ನು ಒಂದು ಕಡೆ ಕೂಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜನರೆಲ್ಲರು ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀ ಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗುವರು. ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು.