ಧರ್ಮೋಪದೇಶಕಾಂಡ 31:21 - ಕನ್ನಡ ಸಮಕಾಲಿಕ ಅನುವಾದ21 ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.” ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.