ಧರ್ಮೋಪದೇಶಕಾಂಡ 31:27 - ಕನ್ನಡ ಸಮಕಾಲಿಕ ಅನುವಾದ27 ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು. ಅಧ್ಯಾಯವನ್ನು ನೋಡಿ |
“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.