ಧರ್ಮೋಪದೇಶಕಾಂಡ 31:29 - ಕನ್ನಡ ಸಮಕಾಲಿಕ ಅನುವಾದ29 ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |