Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಅಮೋರಿಯರ ಅರಸನಾದ ಸೀಹೋನನಿಗೂ, ಓಗನಿಗೂ, ಅವರ ದೇಶಕ್ಕೂ ಮಾಡಿದ ಪ್ರಕಾರ ಆ ಜನಾಂಗಗಳನ್ನು ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ, ಅಮೋರಿಯರ ಅರಸರಾದ ಸೀಹೋನ್ ಹಾಗು ಓಗರನ್ನು ನಾಶಮಾಡಿ ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಓಗರನ್ನು ನಾಶಮಾಡಿ ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಯೆಹೋವನು ಸೀಹೋನನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶದಲ್ಲಿಯೂ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:4
10 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.


ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು.


ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಕೊಡುವಾಗ, ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಅವರಿಗೆ ಮಾಡಬೇಕು.


ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು