Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:13 - ಕನ್ನಡ ಸಮಕಾಲಿಕ ಅನುವಾದ

13 ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ, ಅವರಿಗೆ ವ್ಯವಸಾಯ ವೃದ್ಧಿಯನ್ನುಂಟುಮಾಡಿ, ಬಂಡೆಯಿಂದ ಜೇನೂ, ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಅವರನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯವೃದ್ಧಿಯನ್ನುಂಟುಮಾಡಿ ಬಂಡೆಯಿಂದ ಜೇನೂ ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:13
16 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರಲ್ಲಿ ಆನಂದಗೊಳ್ಳುವಿ. ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿಸುವಂತೆ ನಿನಗೆ ಮಾಡುವೆನು.” ಏಕೆಂದರೆ ಯೆಹೋವ ದೇವರ ಬಾಯಿ ಇದನ್ನು ನುಡಿದಿದೆ.


ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು.


ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಏಕೆಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ, “ಆಹಾ, ಪೂರ್ವದ ಉತ್ತಮ ಸ್ಥಳಗಳು ನಮ್ಮ ಸೊತ್ತಾದವು,” ಎಂದು ಹೇಳುವರು. ’


ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”


“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”


ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.


ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.


ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ, ಸಮೃದ್ಧಿಯಾಗಿ ಹರಿಯುವ ನದಿಗಳನ್ನೂ ನೋಡನು.


ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.


ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. ಅವರು ತೃಪ್ತರಾದಾಗ, ಅಹಂಕಾರಿಗಳಾದರು, ಅನಂತರ ಅವರು ನನ್ನನ್ನು ಮರೆತುಬಿಟ್ಟರು.


ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಂತೋಷದಿಂದಲೂ ಹರ್ಷದಿಂದಲೂ ಸೇವೆಮಾಡದೆ ಹೋದಿರಿ.


ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು