Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:14 - ಕನ್ನಡ ಸಮಕಾಲಿಕ ಅನುವಾದ

14 ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಪಾನಕ್ಕಾಗಿ ದ್ರಾಕ್ಷೆಯ ರಕ್ತರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:14
22 ತಿಳಿವುಗಳ ಹೋಲಿಕೆ  

ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.


ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.


ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ಟಗರು, ಕುರಿಮರಿ, ಹೋತ, ಹೋರಿ ಮತ್ತು ಬಾಷಾನಿನ ಕೊಬ್ಬಿದ ಪ್ರಾಣಿಗಳಂತೆ ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ರಾಜಕುಮಾರರ ರಕ್ತವನ್ನು ಕುಡಿಯುವಿರಿ.


ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.


ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು.


ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ, ಸಮೃದ್ಧಿಯಾಗಿ ಹರಿಯುವ ನದಿಗಳನ್ನೂ ನೋಡನು.


ಹುರಿದ ಕಡಲೆ, ಜೇನುತುಪ್ಪ, ಬೆಣ್ಣೆ, ಕುರಿ, ಹಸುವಿನ ಗಿಣ್ಣು ಇವುಗಳನ್ನು ದಾವೀದನಿಗೂ, ಅವನ ಸಂಗಡ ಇದ್ದ ಜನರಿಗೂ ತಿನ್ನುವುದಕ್ಕೆ ತಂದರು. ಏಕೆಂದರೆ, “ಮರುಭೂಮಿಯಲ್ಲಿ ಜನರು ಹಸಿದು ದಣಿದು ದಾಹಗೊಂಡಿರುವರು,” ಎಂದುಕೊಂಡರು.


ಅವನು ನೀರನ್ನು ಕೇಳಿದನು. ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.


ತರುವಾಯ ಮೊಸರನ್ನೂ, ಹಾಲನ್ನೂ, ಪಕ್ವಮಾಡಿದ ಮಾಂಸವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು. ಅವನಾದರೋ ಮರದ ಕೆಳಗೆ ಅವರ ಹತ್ತರ ನಿಂತುಕೊಂಡನು. ಅವರು ಊಟಮಾಡಿದರು.


ಆಗ ಪಟ್ಟಣದ ಹೊರಗೆ ದ್ರಾಕ್ಷಿಯ ತೊಟ್ಟಿಯನ್ನು ತುಳಿಯಲಾಯಿತು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು, ಕುದುರೆಗಳ ಕಡಿವಾಣವನ್ನು ಮುಟ್ಟುವಷ್ಟು ಮುನ್ನೂರು ಕಿಲೋಮೀಟರ್ ದೂರ ಹರಿಯಿತು.


“ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ.


ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು.


ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಂತೋಷದಿಂದಲೂ ಹರ್ಷದಿಂದಲೂ ಸೇವೆಮಾಡದೆ ಹೋದಿರಿ.


ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ನಾನು ಅವರನ್ನು ಮನುಷ್ಯನ ಹಗ್ಗಗಳಿಂದಲೂ, ಪ್ರೀತಿಯ ಬಂಧನಗಳಿಂದಲೂ ಎಳೆದೆನು. ಅವರಿಗೆ ನಾನು ಚಿಕ್ಕ ಮಗುವನ್ನು ಕೆನ್ನೆಯವರೆಗೆ ಎತ್ತುವವರಂತೆ ಇದ್ದೆ, ಮತ್ತು ನಾನು ಅವರಿಗೆ ಬಾಗಿ ತಿನ್ನಿಸುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು