Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:2 - ಕನ್ನಡ ಸಮಕಾಲಿಕ ಅನುವಾದ

2 ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ [ತಣ್ಣಗಿರುವದು;] ನನ್ನ ಬೋಧನೆಯು ಮಂಜಿನಂತೆಯೂ ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ [ಹಿತವಾಗಿರುವದು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:2
14 ತಿಳಿವುಗಳ ಹೋಲಿಕೆ  

ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.


ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.


ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.


ಮೋಡವಿಲ್ಲದ ಮುಂಜಾನೆ ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. ಭೂಮಿಯಿಂದ ಹುಲ್ಲು ಮೊಳೆಯಿಸುವ ಮಳೆಯ ನಂತರದ ಪ್ರಕಾಶದಂತಿರುವನು.’


ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.


ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ.


ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.


ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.


ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು