Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:34 - ಕನ್ನಡ ಸಮಕಾಲಿಕ ಅನುವಾದ

34 “ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ? ಇದನ್ನು ನಾನು ಮುದ್ರಿಸಿದ್ದಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇದನ್ನೆಲ್ಲಾ ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಯೆಹೋವನು ಹೀಗೆನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ. ಅದನ್ನು ನಾನು ನನ್ನ ಉಗ್ರಾಣದಲ್ಲಿ ಸುರಕ್ಷಿತವಾಗಿರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:34
10 ತಿಳಿವುಗಳ ಹೋಲಿಕೆ  

ಎಫ್ರಾಯೀಮಿನ ದುಷ್ಕೃತ್ಯವು ಸಂಗ್ರಹವಾಗಿದೆ. ಅವನ ಪಾಪವು ದಾಖಲೆಯಾಗಿದೆ.


ನನ್ನ ಅಪರಾಧಗಳನ್ನು ಮೂಟೆಕಟ್ಟಿ ಮುದ್ರೆ ಹಾಕಿಬಿಡುವಿರಿ; ನೀವು ನನ್ನ ಅನ್ಯಾಯವನ್ನು ಮರೆಮಾಡುವಿರಿ.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ, ಹಾವುಗಳ ಕ್ರೂರ ವಿಷವೂ ಆಗಿದೆ.


ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆಹಾಕಿ, ಸಾಕ್ಷಿಗಳನ್ನಿಟ್ಟು, ಬೆಳ್ಳಿಯನ್ನು ತ್ರಾಸಿನಲ್ಲಿ ತೂಕಮಾಡಿದೆನು.


“ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?


ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು