ಧರ್ಮೋಪದೇಶಕಾಂಡ 32:35 - ಕನ್ನಡ ಸಮಕಾಲಿಕ ಅನುವಾದ35 ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’ ಅಧ್ಯಾಯವನ್ನು ನೋಡಿ |