ಧರ್ಮೋಪದೇಶಕಾಂಡ 32:38 - ಕನ್ನಡ ಸಮಕಾಲಿಕ ಅನುವಾದ38 ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ದೇವರುಗಳು ಎಲ್ಲಿ? ಈಗ ಆ ದೇವರುಗಳು ಎದ್ದು ನಿಮಗೆ ಸಹಾಯ ಮಾಡಲಿ, ನಿಮಗೋಸ್ಕರ ಕಾವಲಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅವರು ಬಲಿಕೊಟ್ಟ ಕೊಬ್ಬು ಮಾಂಸವನು ತಿಂದವರೆಲ್ಲಿ? ಸಮರ್ಪಿಸಿದ ಪಾನಗಳನು ಕುಡಿದ ದೇವತೆಗಳೆಲ್ಲಿ? ಅವರೇ ನಿಮಗೆ ನೆರವಾಗಲಿ, ನಿಮ್ಮನೀಗ ಕಾಯಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳುದೇವರುಗಳು ತಿಂದುಬಿಟ್ಟವು. ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದುಬಿಟ್ಟವು. ಆ ದೇವರುಗಳೆದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ. ಅಧ್ಯಾಯವನ್ನು ನೋಡಿ |