Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:39 - ಕನ್ನಡ ಸಮಕಾಲಿಕ ಅನುವಾದ

39 “ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 “ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:39
41 ತಿಳಿವುಗಳ ಹೋಲಿಕೆ  

“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ.


ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?”


ನಿಮ್ಮ ಮುಪ್ಪಿನ ತನಕ ನಾನೇ ಆಧಾರ; ನೆರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು; ನಾನೇ ಹೊರುವೆನು; ಹೌದು, ನಿಮ್ಮನ್ನು ಹೊತ್ತು, ಸಹಿಸಿ, ನಿರ್ವಹಿಸುವೆನು.


ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.


ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾರೆ. ಸಾರ್ವಭೌಮ ಯೆಹೋವ ದೇವರು ಮರಣದಿಂದ ಬಿಡುಗಡೆ ಮಾಡುತ್ತಾರೆ.


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ.


ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


“ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ಆತನು ನಾನೇ, ನಾನೇ ಮೊದಲನೆಯವನು, ನಾನೇ ಕಡೆಯವನು.


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


ಅವುಗಳನ್ನು ಮೇಲಂಗಿಯಂತೆ ಮಡಿಸುತ್ತಿರಿ, ಅವು ವಸ್ತ್ರದಂತೆ ಮಾರ್ಪಡುತ್ತವೆ. ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ!”


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ದೇವರು ಅವನಿಗೆ, “ನಿನ್ನ ಕೈಯನ್ನು ಉಡಿಯಲ್ಲಿ ಹಾಕು,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ, ಉಡಿಯಿಂದ ಹೊರಗೆ ತೆಗೆದಾಗ, ಅದು ಅವನ ಉಳಿದ ಮೈಯಂತೆ ಆಗಿತ್ತು.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಯೆಹೋವ ದೇವರು ಮಾತ್ರವೇ ಇಸ್ರಾಯೇಲರನ್ನು ನಡೆಸಿಕೊಂಡು ಬಂದರು. ಅನ್ಯದೇವರು ಯಾರೂ ಇಸ್ರಾಯೇಲರ ಸಂಗಡ ಇರಲಿಲ್ಲ.


ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ರಕ್ಷಕ ಯಾರು?


ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ; ನೀವು ಜಜ್ಜಿದ ಎಲುಬುಗಳು ಆನಂದಪಡಲಿ.


ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ. ನೀವೊಬ್ಬರೇ ದೇವರು.


ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರನ್ನು ಹೊಡೆಯುವರು; ಗಾಯಮಾಡಿ ಸ್ವಸ್ಥ ಮಾಡುವರು. ಅವರು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು, ದೇವರು ಅವರನ್ನು ಆಲೈಸಿ ಸ್ವಸ್ಥ ಮಾಡುವರು.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.


ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು.


ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.


ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.


“ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ:


ನಿಮ್ಮ ಸೇವಕರ ಮಕ್ಕಳು ನಿಮ್ಮ ಸನ್ನಿಧಿಯಲ್ಲಿ ಬದುಕುವರು; ಅವರ ಸಂತತಿಯು ನಿಮ್ಮ ಮುಂದೆ ನೆಲೆಯಾಗಿರುವುದು.”


ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.


ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ, ನಾನೇ ರಕ್ಷಣೆಯನ್ನು ಪ್ರಕಟಿಸಿ, ತೋರಿಸಿದ್ದೇನೆ. ಆದ್ದರಿಂದ ನೀವು ನನ್ನ ಸಾಕ್ಷಿಗಳು,” “ನಾನೇ ದೇವರು ಎಂದು ಯೆಹೋವ ದೇವರು ನುಡಿಯುತ್ತಾರೆ.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು