ಧರ್ಮೋಪದೇಶಕಾಂಡ 32:4 - ಕನ್ನಡ ಸಮಕಾಲಿಕ ಅನುವಾದ4 ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿ |