ಧರ್ಮೋಪದೇಶಕಾಂಡ 32:41 - ಕನ್ನಡ ಸಮಕಾಲಿಕ ಅನುವಾದ41 ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ ನ್ಯಾಯವನ್ನು ಸ್ಥಾಪಿಸುವದಕ್ಕೆ ಮುಂಗೊಂಡಾಗ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ. ಅಧ್ಯಾಯವನ್ನು ನೋಡಿ |
ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.