Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:47 - ಕನ್ನಡ ಸಮಕಾಲಿಕ ಅನುವಾದ

47 ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವದರಿಂದಲೇ ಬಹುಕಾಲ ಇರುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧವಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:47
24 ತಿಳಿವುಗಳ ಹೋಲಿಕೆ  

ಏಕೆಂದರೆ ಆ ನುಡಿಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ, ದೇಹಕ್ಕೆಲ್ಲಾ ಆರೋಗ್ಯವೂ ಆಗಿವೆ.


ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶಕ್ತಿಯ ಬಗ್ಗೆಯೂ ಅವರ ಪುನರಾಗಮನದ ಬಗ್ಗೆಯೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಕುತಂತ್ರವಾಗಿ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸಲಿಲ್ಲ. ಆದರೆ ನಾವೇ ಕ್ರಿಸ್ತ ಯೇಸುವಿನ ಮಹತ್ತನ್ನು ಕಣ್ಣಾರೆ ಕಂಡವರಾಗಿ ತಿಳಿಯಪಡಿಸಿದೆವು.


ಅವು ನಿನಗೆ ಜೀವವಾಗಿರಲಿ. ನಿನ್ನ ಕೊರಳಿಗೆ ಆಭರಣವೂ ಆಗಿರುವುವು.


ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.


ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.


ನಿನ್ನ ದ್ವಾರಗಳ ಅಗುಳಿಗಳು ಕಬ್ಬಿಣದ ಮತ್ತು ಕಂಚಿನವುಗಳು ಆಗಿರಲಿ. ನಿನ್ನ ಜೀವಮಾನಕಾಲವೆಲ್ಲಾ ನಿನಗೆ ಬಲವಿರುವುದು.


ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.


ದೇವರ ಈ ನಿಯಮವನ್ನು ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವುದಕ್ಕೆ ಕಲಿತುಕೊಳ್ಳಿರಿ, ಎಂದು ಅವರಿಗೆ ಆಜ್ಞಾಪಿಸಿ ಹೇಳಬೇಕು,” ಎಂದನು.


ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು