Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:49 - ಕನ್ನಡ ಸಮಕಾಲಿಕ ಅನುವಾದ

49 “ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 “ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 “ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಬೆಟ್ಟದ ಸಾಲಿಗೆ ಹೋಗಿ ಅಲ್ಲಿ ನೆಬೋ ಬೆಟ್ಟವನ್ನೇರು. ಇದು ಜೆರಿಕೊ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:49
10 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಮೋಶೆಗೆ, “ನೀನು ಈ ಅಬಾರೀಮ್ ಪರ್ವತದ ಮೇಲೆ ಏರಿ, ನಾನು ಇಸ್ರಾಯೇಲರಿಗೆ ಕೊಟ್ಟ ದೇಶವನ್ನು ನೋಡು.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವುವು. ಅತಿವಿಸ್ತಾರವಾದ ದೇಶವನ್ನು ಕಣ್ಣು ತುಂಬಾ ನೋಡುವಿರಿ.


ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.


“ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,


ಪಿಸ್ಗಾದ ತುದಿಗೆ ಏರಿ, ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ, ಪೂರ್ವಕ್ಕೂ ಕಣ್ಣೆತ್ತಿ ಅದನ್ನು ಕಣ್ಣಾರೆ ನೋಡು. ಈ ಯೊರ್ದನನ್ನು ನೀನು ದಾಟಿ ಹೋಗುವುದಿಲ್ಲ.


“ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು