Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:50 - ಕನ್ನಡ ಸಮಕಾಲಿಕ ಅನುವಾದ

50 ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅನಂತರ, ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿಗೆ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ನಿನ್ನ ಅಣ್ಣನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತುಹೋದಂತೆಯೇ ನೀನೂ ನೆಬೋ ಬೆಟ್ಟದ ಮೇಲೆ ಸಾಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:50
12 ತಿಳಿವುಗಳ ಹೋಲಿಕೆ  

ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿ ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.


ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು.


“ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.


ಇಷ್ಮಾಯೇಲನು ಬದುಕಿದ ವರ್ಷಗಳು ನೂರಮೂವತ್ತೇಳು. ಅವನು ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.


ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.


ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಹಷ್ಮೋನಾದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು