Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:51 - ಕನ್ನಡ ಸಮಕಾಲಿಕ ಅನುವಾದ

51 ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ನೀವಿಬ್ಬರೂ ಚಿನ್ ಮರುಭೂಮಿಯಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟು ಬಂದ ಸ್ಥಳದ ಬಳಿಯಲ್ಲಿ, ಇಸ್ರಯೇಲರ ಮಧ್ಯೆ ನನಗೆ ವಿರೋಧವಾಗಿ ದ್ರೋಹಮಾಡಿದಿರಿ; ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದಲೇ ಹೀಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ನೀವಿಬ್ಬರೂ ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿ ಇಸ್ರಾಯೇಲ್ಯರ ಮಧ್ಯದಲ್ಲಿ ನನಗೆ ವಿರೋಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆ ಹೋದದರಿಂದ ಹೀಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:51
10 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.


“ಆರೋನನು ತನ್ನ ಪಿತೃಗಳ ಸಂಗಡ ಸೇರುವನು, ಏಕೆಂದರೆ ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿಬಿದ್ದದರಿಂದ, ನಾನು ಇಸ್ರಾಯೇಲರಿಗೆ ಕೊಡುವ ದೇಶಕ್ಕೆ ಅವನು ಪ್ರವೇಶಿಸುವುದಿಲ್ಲ.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ.


ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವುದೆಂದರೆ: ಕಟ್ಟಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಚಿನ್ ಮರುಭೂಮಿಯ ದಕ್ಷಿಣ ಭಾಗ.


ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಇದೇ ದಕ್ಷಿಣದ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು