ಧರ್ಮೋಪದೇಶಕಾಂಡ 32:7 - ಕನ್ನಡ ಸಮಕಾಲಿಕ ಅನುವಾದ7 ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೆನಪಿಗೆ ತಂದುಕೊಳ್ಳಿ ಆ ಪೂರ್ವಕಾಲವನು ಆಲೋಚಿಸಿ ನೋಡಿ ಪೂರ್ವಿಕರ ಚರಿತೆಯನು. ವಿಚಾರಿಸಿದರೆ ತಿಳಿಸುವರು ನಿಮ್ಮ ನಿಮ್ಮ ತಂದೆಗಳು ಕೇಳಿದರೆ ವಿವರಿಸುವರು ನಿಮ್ಮ ನಿಮ್ಮ ಹಿರಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ಪೂರ್ವಿಕರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು; ಹೇಗಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು. ಅಧ್ಯಾಯವನ್ನು ನೋಡಿ |