ಧರ್ಮೋಪದೇಶಕಾಂಡ 33:1 - ಕನ್ನಡ ಸಮಕಾಲಿಕ ಅನುವಾದ1 ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.