ಧರ್ಮೋಪದೇಶಕಾಂಡ 33:16 - ಕನ್ನಡ ಸಮಕಾಲಿಕ ಅನುವಾದ16 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸೋದರರಿಗೆ ಸಾಮ್ರಾಟನಾದ ಜೋಸೆಫನ ಪಾಲಿಗೆ ಬರಲಿ ಇವನ ಕುಲದ ಮೇಲೆ ನೆಲಸಲಿ ನೆಲಬೆಳೆಸುವ ಫಲಗಳಲಿ ಶ್ರೇಷ್ಠವಾದುದೆಲ್ಲವು ಮುಳ್ಳುಪೊದೆಯಲಿ ಕಾಣಿಸಿಕೊಂಡಾತನ ದಯೆಯು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಭೂವಿುಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ [ಹೋರೇಬ್‍ಬೆಟ್ಟದಲ್ಲಿನ] ಮುಳ್ಳುಗಿಡದಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಕುಲದವರ ಶಿರಸ್ಸಿನ ಮೇಲೆ ಉಂಟಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ. ಅಧ್ಯಾಯವನ್ನು ನೋಡಿ |