Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:18 - ಕನ್ನಡ ಸಮಕಾಲಿಕ ಅನುವಾದ

18 ಮೋಶೆಯು ಜೆಬುಲೂನರ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬೂಲೂನನೇ, ನಿನ್ನ ಪ್ರಯಾಣದಲ್ಲಿ ಸಂತೋಷಪಡು. ಇಸ್ಸಾಕಾರನೇ, ನಿನ್ನ ಗುಡಾರಗಳಲ್ಲಿ ಸಂತೋಷಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಜೆಬುಲೂನ್ ಮತ್ತು ಇಸ್ಸಾಕಾರ ಕುಲ ಕುರಿತು ಮೋಶೆ ನುಡಿದದ್ದು: “ಜೆಬುಲೂನೇ, ಸಂತೋಷವಾಗಿರು ನಿನ್ನ ಪಯಣಗಳಲ್ಲಿ. ಇಸ್ಸಾಕಾರನೇ, ಆನಂದವಾಗಿರು ನಿನ್ನ ಪಾಳೆಯಗಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಜೆಬುಲೂನ್ಯರ [ಮತ್ತು ಇಸ್ಸಾಕಾರ್ಯರ] ವಿಷಯದಲ್ಲಿ ಹೀಗಂದನು - ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರ್ರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬುಲೂನನೇ, ನೀನು ಹೊರಗೆ ಹೋಗುವಾಗ ಸಂತೋಷವಾಗಿರು. ಇಸ್ಸಾಕಾರನೇ, ನೀನು ನಿನ್ನ ಗುಡಾರದೊಳಗಿರುವಾಗ ಸಂತೋಷದಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:18
4 ತಿಳಿವುಗಳ ಹೋಲಿಕೆ  

ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು.


ಅಲ್ಲಿಂದ ಪಶ್ಚಿಮ ಕಡೆಗೆ ಹೋಗಿ, ಮರಾಳಕ್ಕೆ ಏರಿ, ದಬ್ಬೆಷೆತಿಗೆ ಹೋಗಿ, ಯೊಕ್ನೆಯಾಮಿಗೆ ಎದುರಾದ ಹಳ್ಳಕ್ಕೆ ಹೋಗುತ್ತದೆ.


ಲೇಯಳು, “ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ, ಅವನಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು