ಧರ್ಮೋಪದೇಶಕಾಂಡ 33:20 - ಕನ್ನಡ ಸಮಕಾಲಿಕ ಅನುವಾದ20 ಮೋಶೆಯು ಗಾದನ ವಿಷಯವಾಗಿ ಹೇಳಿದ್ದೇನೆಂದರೆ: “ಗಾದನ ರಾಜ್ಯವನ್ನು ವಿಸ್ತಾರ ಮಾಡಿದ ದೇವರು ಸ್ತುತಿಹೊಂದಲಿ. ಅವನು ಸಿಂಹದಂತೆ ಜೀವಿಸಿ ತೋಳನ್ನೂ ಶಿರಸ್ಸನ್ನೂ ಮುರಿಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಗಾದ್ ಕುಲ ಕುರಿತು ಮೋಶೆ ನುಡಿದದ್ದು: “ಗಾದ್ಯರ ಪ್ರಾಂತ್ಯವನು ವಿಸ್ತರಿಸಿದ ಸರ್ವೇಶ್ವರನಿಗೆ ಸ್ತೋತ್ರವು! ಸಿಂಹದಂತೆ ಹೊಂಚುಹಾಕಿ ಮುರಿವನು ಗಾದನು ಶತ್ರುಗಳ ಭುಜವನು, ಶಿರವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಗಾದ್ ಕುಲದವರ ವಿಷಯದಲ್ಲಿ ಹೀಗಂದನು - ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು [ಶತ್ರುಗಳ] ಭುಜವನ್ನೂ ಶಿರಸ್ಸನ್ನೂ ಮುರಿಯುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು. ಅಧ್ಯಾಯವನ್ನು ನೋಡಿ |