Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:26 - ಕನ್ನಡ ಸಮಕಾಲಿಕ ಅನುವಾದ

26 “ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಶುರೂನೇ, ನಿಮ್ಮ ದೇವರಿಗೆ ಸಮಾನನು ಯಾವನೂ ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿಮ್ಮ ಸಹಾಯಕ್ಕೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:26
24 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?


ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.


ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ?


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ. ಮೋಡಗಳನ್ನು ತಮ್ಮ ರಥವಾಗಿ ಮಾಡುತ್ತಾರೆ. ಗಾಳಿಯ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಾರೆ.


ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ. ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.


ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಪರಿಶುದ್ಧ ದೇವರು ಕೇಳುತ್ತಾರೆ.


ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶ ಒಂದು ಹುಟ್ಟೀತೇ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೇ? ಆದರೂ ಪ್ರಸವವೇದನೆ ತೊಡಗಿದೊಡನೆ ಚೀಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.


ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.


ಫರೋಹನು ಮೋಶೆಗೆ, “ನಾಳೆ,” ಎಂದನು. ಆಗ ಮೋಶೆಯು, “ನಮ್ಮ ದೇವರಾಗಿರುವ ಯೆಹೋವ ದೇವರ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ನಿನ್ನ ಮಾತಿನ ಪ್ರಕಾರ ಆಗಲಿ.


ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ.


ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.


“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದೀ.


ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.


ಆರೋನನು ಈಜಿಪ್ಟಿನ ನೀರಿನ ಮೇಲೆ ಕೈಚಾಚಿದಾಗ, ಕಪ್ಪೆಗಳು ಏರಿಬಂದು ಈಜಿಪ್ಟ್ ದೇಶವನ್ನು ಮುತ್ತಿಕೊಂಡವು.


“ನಿಮ್ಮ ಮಹತ್ತಾದ ಘನತೆಯಲ್ಲಿ ನಿಮಗೆ ವಿರೋಧವಾಗಿ ಎದ್ದವರನ್ನು ಕೆಡವಿಬಿಟ್ಟಿರುವಿರಿ. ನಿಮ್ಮ ಕೋಪವು ಬೆಂಕಿಯಂತೆ ಕಾರಿದೆ; ಅದು ಅವರನ್ನು ಕೋಲಿನಂತೆ ದಹಿಸಿತು.


ಇಸ್ರಾಯೇಲರ ಮುಖ್ಯಸ್ಥರೂ ಅವರ ಗೋತ್ರಗಳು ಒಟ್ಟಾಗಿ ಸೇರಿಬಂದಾಗ, ದೇವರೇ ಯೆಶುರೂನಿನ ಮೇಲೆ ಅರಸನಾಗಿದ್ದರು.


ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು