Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:27 - ಕನ್ನಡ ಸಮಕಾಲಿಕ ಅನುವಾದ

27 ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:27
48 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.


ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


“ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.


ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಆದ್ದರಿಂದ ನಾನು, “ನನ್ನ ದೇವರೇ, ನನ್ನ ಆಯುಷ್ಯದ ಮಧ್ಯದಲ್ಲಿ ನನ್ನನ್ನು ತೆಗೆದುಕೊಳ್ಳಬೇಡಿರಿ; ನಿಮ್ಮ ವರ್ಷಗಳು ತಲತಲಾಂತರಗಳಿಗೂ ಇವೆ.


ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ಅವನ ಎಡಗೈ ನನ್ನ ತಲೆದಿಂಬಾಗಿರಲಿ. ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳಲಿ.


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ.


ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.


ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವುದನ್ನು ಅನುಸರಿಸಿ ನಡೆಯಬೇಕು. ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ, ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆಯೇ ಹೊರಡಿಸಿಬಿಡುತ್ತೇನೆ.


ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.


ನಾನು ಯಾವಾಗಲೂ ಆಶ್ರಯಿಸಿಕೊಳ್ಳುವ ಬಂಡೆಯಾಗಿರಿ. ನನ್ನನ್ನು ರಕ್ಷಿಸುವುದಕ್ಕೆ ಆಜ್ಞಾಪಿಸಿರಿ. ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ ಆಗಿದ್ದೀರಿ.


ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ.


ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು.


ದೇವರ ಶಕ್ತಿಯನ್ನು ಘೋಷಿಸಿರಿ. ಇಸ್ರಾಯೇಲರ ಮೇಲೆ ಅವರ ಪ್ರಭಾವವಿರುತ್ತದೆ. ಮೇಘಗಳಲ್ಲಿ ಅವರ ಶಕ್ತಿಯು ಇರುತ್ತದೆ.


ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ.


“ಮೆರಾಥಯಿಮ್ ದೇಶಕ್ಕೆ ವಿರೋಧವಾಗಿ, ಪೆಕೋದಿನ ನಿವಾಸಿಗಳಿಗೆ ವಿರೋಧವಾಗಿಯೂ ದಂಡೆತ್ತಿ ಹೋಗು; ಅವರನ್ನು ಹಿಂದಟ್ಟಿ ಸಂಹರಿಸು. ಸಂಪೂರ್ಣ ನಾಶಮಾಡು.” “ನಾನು ನಿನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾಡು, ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಎಫ್ರಾಯೀಮಿನ ತೋಳುಗಳನ್ನು ಹಿಡಿದು ನಡೆಯುವುದನ್ನು ಕಲಿಸಿದೆನು. ಆದರೆ ನಾನು ಅವರನ್ನು ಸ್ವಸ್ಥ ಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.


ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ. ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು