Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:29 - ಕನ್ನಡ ಸಮಕಾಲಿಕ ಅನುವಾದ

29 ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:29
43 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ಸಾರ್ವಭೌಮ ಯೆಹೋವ ದೇವರು ನನ್ನ ಬಲವು. ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ನಮ್ಮ ಪ್ರಾಣವು ಯೆಹೋವ ದೇವರಿಗಾಗಿ ಕಾದಿದೆ; ನಮ್ಮ ಸಹಾಯವೂ ನಮ್ಮ ಗುರಾಣಿಯೂ ಅವರೇ.


ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.


ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ, ಅವರಿಗೆ ವ್ಯವಸಾಯ ವೃದ್ಧಿಯನ್ನುಂಟುಮಾಡಿ, ಬಂಡೆಯಿಂದ ಜೇನೂ, ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದರು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.


ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.


ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.


ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.


ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.


ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.


ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.


ಅಂಥವರು ತಿರುಗಿಕೊಳ್ಳದಿದ್ದರೆ ದೇವರು ತಮ್ಮ ಖಡ್ಗ ಮಸೆಯುವರು; ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು.


“ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!


“ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು.


ಯೆಹೋವ ದೇವರನ್ನು ದ್ವೇಷಿಸುವವರು ತಮ್ಮನ್ನು ತಾವೇ ದೇವರಿಗೆ ಒಪ್ಪಿಸಿಕೊಡುವರು. ಆದರೂ ಅವರಿಗೆ ಶಿಕ್ಷೆ ತಪ್ಪುವುದಿಲ್ಲ.


ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.


ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ, ಆ ಕೊಡಗಳನ್ನು ಒಡೆದುಬಿಟ್ಟು, ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ, ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು, “ಯೆಹೋವ ದೇವರಿಗಾಗಿ ಖಡ್ಗ, ಗಿದ್ಯೋನನಿಗಾಗಿ ಖಡ್ಗ,” ಎಂದು ಕೂಗಿ ಪಾಳೆಯ ಸುತ್ತಲೂ ಅವರವರ ಸ್ಥಳದಲ್ಲಿ ನಿಂತರು.


ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.


ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ?


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು; ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ಅವರು ನನ್ನ ಉನ್ನತವಾದ ದುರ್ಗವೂ, ನನ್ನ ಆಶ್ರಯವೂ, ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವರೂ ಅವರೇ ಆಗಿದ್ದಾರೆ.


ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.


ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,


ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.


ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.


ದೇವರ ಶಕ್ತಿಯನ್ನು ಘೋಷಿಸಿರಿ. ಇಸ್ರಾಯೇಲರ ಮೇಲೆ ಅವರ ಪ್ರಭಾವವಿರುತ್ತದೆ. ಮೇಘಗಳಲ್ಲಿ ಅವರ ಶಕ್ತಿಯು ಇರುತ್ತದೆ.


ಆಗ ಯೆಹೋವ ದೇವರಲ್ಲಿ ಆನಂದಗೊಳ್ಳುವಿ. ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿಸುವಂತೆ ನಿನಗೆ ಮಾಡುವೆನು.” ಏಕೆಂದರೆ ಯೆಹೋವ ದೇವರ ಬಾಯಿ ಇದನ್ನು ನುಡಿದಿದೆ.


“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದೀ.


ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.


ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.


ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿರುವುವು. ರೊಟ್ಟಿಯು ಅವನಿಗೆ ಒದಗುವುದು. ನೀರು ತಪ್ಪುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು