Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:9 - ಕನ್ನಡ ಸಮಕಾಲಿಕ ಅನುವಾದ

9 ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:9
17 ತಿಳಿವುಗಳ ಹೋಲಿಕೆ  

“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ,


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.


ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಆದ್ದರಿಂದ ಮನುಷ್ಯರು ದೇವರಿಗೆ ಭಯಪಡುತ್ತಾರೆ; ಆದರೆ ತಾವೇ ಜ್ಞಾನಿಗಳೆಂದು ತಿಳಿದಿರುವವರು ದೇವರು ಲಕ್ಷಿಸುವುದಿಲ್ಲ.”


ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ.


ಯಾವ ಮೃತ ಶರೀರದ ಬಳಿಗೂ ಹೋಗಬಾರದು, ಅವನು ತನ್ನ ತಂದೆತಾಯಿಗಳ ಮರಣದ ನಿಮಿತ್ತ, ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.


ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.


ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.


ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ಯೆಹೋವ ದೇವರೇ, ನೀವೇ ನನ್ನ ಪಾಲು; ನಿಮ್ಮ ವಾಕ್ಯಗಳನ್ನು ಪಾಲಿಸುವೆನೆಂದು ನಾನು ಪ್ರಮಾಣ ಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು