Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಬಳಿಕೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:10
10 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.


“ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.


ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರ ದೃಷ್ಟಿಯಲ್ಲಿ ಜನರಿಗೆ ದಯೆ ದೊರಕುವಂತೆ ಮಾಡಿದರು. ಇದಲ್ಲದೆ ಮೋಶೆಯು ಈಜಿಪ್ಟ್ ದೇಶದಲ್ಲಿಯೂ ಫರೋಹನ ಅಧಿಕಾರಿಗಳ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹಳ ಗೌರವ ಹೊಂದಿದನು.


ಈಜಿಪ್ಟಿನಲ್ಲಿ ಫರೋಹನ ಮುಂದೆಯೂ, ಅವನ ಎಲ್ಲಾ ಅಧಿಕಾರಿಗಳ ಮುಂದೆಯೂ, ಜನರ ಮುಂದೆಯೂ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ಮಾಡುವುದಕ್ಕೆ ಯೆಹೋವ ದೇವರು ಮೋಶೆಯನ್ನು ಕಳುಹಿಸಿದ್ದರು.


ಮೋಶೆ ಹೇಳಿದ ಪ್ರಕಾರ ಯೆಹೋವ ದೇವರು ಮಾಡಿದರು. ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು