ಧರ್ಮೋಪದೇಶಕಾಂಡ 4:11 - ಕನ್ನಡ ಸಮಕಾಲಿಕ ಅನುವಾದ11 ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ. ಆ ಬೆಟ್ಟವು ಕತ್ತಲೆಯಾಗಿದ್ದು, ಮೇಘಗಳೂ, ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದವರೆಗೆ ಬೆಂಕಿಯಿಂದ ಉರಿಯುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಮೊಬ್ಬೂ ಮೋಡವೂ ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿದದ್ದೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ನೀವು ಬೆಟ್ಟದ ಸಮೀಪಕ್ಕೆ ಬಂದು ನಿಂತುಕೊಂಡಿರಿ. ಆ ಪರ್ವತವು ಬೆಂಕಿಯಿಂದ ಪ್ರಜ್ವಲಿಸಿ ಆಕಾಶದ ತನಕ ಮುಟ್ಟಿತ್ತು. ಆಗ ಕಾರ್ಮೋಡವೂ ಕತ್ತಲೆಯೂ ಆವರಿಸಿತು. ಅಧ್ಯಾಯವನ್ನು ನೋಡಿ |