Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:23 - ಕನ್ನಡ ಸಮಕಾಲಿಕ ಅನುವಾದ

23 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಚ್ಚರಿಕೆಯಾಗಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:23
26 ತಿಳಿವುಗಳ ಹೋಲಿಕೆ  

ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ಆಗ ಯೇಸು ಉತ್ತರವಾಗಿ ಅವರಿಗೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ. ನೀನು ಒಡಂಬಡಿಕೆಯನ್ನು ಮೀರಿ, ನನ್ನ ಆಣೆಯನ್ನು ತಿರಸ್ಕರಿಸಿರುವೆ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.


ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,


ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.


ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”


ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವ ದೇವರನ್ನೇ ಪ್ರೀತಿಸಿರಿ.


ಆಗ ಮೋಶೆಯೂ ಯಾಜಕರಾದ ಲೇವಿಯರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ, “ಇಸ್ರಾಯೇಲರೇ, ಶಾಂತರಾಗಿದ್ದು ಕೇಳಿರಿ. ನೀವು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಜನಾಂಗವಾಗಿದ್ದೀರಿ.


ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.


“ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಬೇರೆ ದೇವರುಗಳ ಹೆಸರನ್ನು ಎತ್ತಬೇಡ. ಅದನ್ನು ಉಚ್ಚರಿಸಲೂ ಬೇಡ.


ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.


ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ನೀವು ಮರೆಯದೆ, ಇತರ ದೇವರುಗಳಿಗೆ ಭಯಪಡದೆ,


“ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಂಡರು.


ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ.


ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು