ಧರ್ಮೋಪದೇಶಕಾಂಡ 4:24 - ಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ದಹಿಸುವ ಅಗ್ನಿಯೂ, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.