Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:25 - ಕನ್ನಡ ಸಮಕಾಲಿಕ ಅನುವಾದ

25 ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆಯುವಷ್ಟು ಕಾಲ ಆ ನಾಡಿನಲ್ಲಿದ್ದು, ಯಾವುದಾದರೊಂದು ವಿಗ್ರಹವನ್ನು ಮಾಡಿಕೊಂಡು ದ್ರೋಹಿಗಳಾಗಿ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರನ್ನು ಸಿಟ್ಟುಗೊಳಿಸಿದ್ದೇ ಆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:25
25 ತಿಳಿವುಗಳ ಹೋಲಿಕೆ  

ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳಬೇಡಿರಿ. ಎಂದರೆ, ಸ್ತ್ರೀಪುರುಷರ ರೂಪದಲ್ಲಾಗಲಿ,


ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.


ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳದೆ ಅವರು ನಿಮಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ನಿಯಮಗಳನ್ನೂ ಕೈಗೊಳ್ಳದೆ ಇದ್ದುದರಿಂದ, ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬಂದು, ನಿಮ್ಮನ್ನು ನಾಶಮಾಡುವವರೆಗೂ ನಿಮ್ಮನ್ನು ಹಿಂದಟ್ಟುವುವು.


ಈ ನಿಯಮದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ನೀವು ಪೂರ್ಣ ನಾಶವಾಗುವವರೆಗೆ ಯೆಹೋವ ದೇವರು ನಿಮ್ಮ ಮೇಲೆ ತರುವರು.


ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು. ಅವರು ಮೂರ್ಖರಾದ ವಕ್ರ ಸಂತತಿ.


ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.


ನೀವು ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿದರೆ, ಅವರು ನಿಮಗೆ ಒಳ್ಳೆಯದನ್ನು ಮಾಡದೆ ಕೇಡನ್ನು ಬರಮಾಡಿ ನಿಮ್ಮನ್ನು ದಹಿಸಿಬಿಡುವರು,” ಎಂದು ಹೇಳಿದನು.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಬಾಳದೆ, ನಾಶವಾಗಿಹೋಗುವಿರಿ ಎಂದು ಈ ಹೊತ್ತು ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.


ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.


ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು