Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:28 - ಕನ್ನಡ ಸಮಕಾಲಿಕ ಅನುವಾದ

28 ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ ಕೇಳಲಾರದೆ ತಿನ್ನಲಾರದೆ ವಾಸನೆ ತಿಳುಕೊಳ್ಳಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:28
22 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’


ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರ ಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.


ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.


ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.


“ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.”


ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.


ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.


ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದ ಬೊಂಬೆಗಳನ್ನೂ ನೀವು ನೋಡಿದ್ದೀರಲ್ಲವೇ?


ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ.


ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ.


ಆದರೆ ಜನರು ಕೇಳದೆ ತಮ್ಮ ಪೂರ್ವದ ಪದ್ಧತಿಯ ಹಾಗೆ ಮಾಡಿದರು.


ಅವನೂ, ಅವನ ಸಂಗಡಿಗರೂ ನಾಚಿಕೆಗೆ ಒಳಗಾಗುವರು ಮತ್ತು ಆ ಕೆತ್ತನೆಯ ಕೆಲಸದವರು ಮನುಷ್ಯ ಮಾತ್ರದವರೇ. ಅವರೆಲ್ಲರೂ ಒಟ್ಟುಗೂಡಿ ನಿಂತುಕೊಳ್ಳಲಿ. ಅವರು ಭಯಪಟ್ಟು, ಒಟ್ಟಿಗೆ ಲಜ್ಜೆಪಡುವರು.


ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು