Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:29 - ಕನ್ನಡ ಸಮಕಾಲಿಕ ಅನುವಾದ

29 ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:29
31 ತಿಳಿವುಗಳ ಹೋಲಿಕೆ  

ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.


ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.


ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ಯೆಹೋವ ದೇವರೇ, ಪೂರ್ಣಹೃದಯದಿಂದ ನಾನು ಮೊರೆಯಿಟ್ಟಿದ್ದೇನೆ; ನನಗೆ ಸದುತ್ತರ ನೀಡಿರಿ; ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು.


ಪೂರ್ಣಹೃದಯದಿಂದ ನಾನು ನಿಮ್ಮ ಮುಖವನ್ನು ಹುಡುಕಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಕರುಣಿಸಿರಿ.


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.


ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.


ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.


ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ


ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.


ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ,


ಈ ತೀರ್ಪುಗಳನ್ನೂ ನಿಯಮಗಳನ್ನೂ ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದ್ದರಿಂದ ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.


ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.


ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.


ಖಡ್ಗದಿಂದ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ. ದೂರದಲ್ಲಿ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.”


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು