Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:30 - ಕನ್ನಡ ಸಮಕಾಲಿಕ ಅನುವಾದ

30 ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮೇಲೆ ಹೇಳಿದ ಎಲ್ಲ ಕಷ್ಟಸಂಕಟಗಳು ನಿಮಗೆ ಸಂಭವಿಸಿ, ಕೊನೆಗೆ ನೀವು ಅವರಿಗೆ ಅಭಿಮುಖರಾಗಿ ಅವನ ಮಾತಿಗೆ ಕಿವಿಗೊಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:30
31 ತಿಳಿವುಗಳ ಹೋಲಿಕೆ  

ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.


ಆಗ ಯಾಕೋಬನು ತನ್ನ ಪುತ್ರರನ್ನು ಕರೆಯಿಸಿ ಅವರಿಗೆ, “ನೀವೆಲ್ಲರೂ ಕೂಡಿಬನ್ನಿರಿ. ಅಂತ್ಯ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.


ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”


ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.


ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ, ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು.


ಇಸ್ರಾಯೇಲರಿಗೋಸ್ಕರ ಯೆಹೋವ ದೇವರು ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ, ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಯೆಹೋವ ದೇವರು ತಮ್ಮನ್ನು ಹೇಗೆ ತಪ್ಪಿಸಿದನೆಂಬುದನ್ನೂ ಮೋಶೆಯು ತನ್ನ ಮಾವನಿಗೆ ತಿಳಿಯಪಡಿಸಿದನು.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು, ನೀವೂ, ನಿಮ್ಮ ಮಕ್ಕಳೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾತುಗಳಿಗೆ, ನೀವು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ದೇವರಿಗೆ ವಿಧೇಯರಾಗಬೇಕು.


ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.”


ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ.


ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು.


ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.


“ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು