Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:32 - ಕನ್ನಡ ಸಮಕಾಲಿಕ ಅನುವಾದ

32 ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ದೇವರು ಮಾನವರನ್ನು ಸೃಷ್ಟಿಸಿ ಭೂಮಿಯ ಮೇಲಿರಿಸಿದ ದಿನ ಮೊದಲ್ಗೊಂಡು ಇಂದಿನವರೆಗೆ, ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೆ, ಅಂಥ ಅದ್ಭುತಕಾರ್ಯ ನಡೆದದ್ದುಂಟೇ? ಅಂಥ ಸುದ್ದಿಯನ್ನಾದರೂ ಕೇಳಿದ್ದುಂಟೇ? ನೀವೇ ವಿಚಾರಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದೇವರು ಮನುಷ್ಯರನ್ನು ಸೃಷ್ಟಿಸಿ ಭೂವಿುಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಅಂಥ ದೊಡ್ಡ ಕಾರ್ಯವು ನಡೆದದ್ದುಂಟೋ, ಇಲ್ಲವೆ ಅಂಥದರ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಇಂಥಾ ಅದ್ಭುತಕಾರ್ಯಗಳು ಹಿಂದೆ ಎಂದಾದರೂ ನಡೆದಿವೆಯೋ? ದೇವರು ಭೂಮಿಯ ಮೇಲೆ ಮಾನವನನ್ನು ನಿರ್ಮಿಸಿದ ಕಾಲದಿಂದಿಡಿದು ಇಂದಿನವರೆಗೂ ಲೋಕದ ಎಲ್ಲಾ ಕಡೆಗಳಲ್ಲಿ ನಡೆದಿರುವ ಸಂಗತಿಗಳನ್ನು ವೀಕ್ಷಿಸಿ ನೋಡಿರಿ. ಇದರಷ್ಟು ಮಹತ್ತಾದ ಯಾವುದನ್ನಾದರೂ ಎಂದಾದರೂ ಕೇಳಿರುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:32
15 ತಿಳಿವುಗಳ ಹೋಲಿಕೆ  

“ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು.


ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.


ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?


ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.


ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.


ನಿಮ್ಮಲ್ಲಿ ಯಾರಾದರೂ ಭೂಮಿಯ ಕಟ್ಟಕಡೆಯವರೆಗೂ ಚದರಿ ಹೋಗಿದ್ದರೂ, ಅಲ್ಲಿಂದ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ಸಹ ಕರೆದುತರುವರು.


ಅದಕ್ಕೆ ಯೆಹೋವ ದೇವರು, “ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿಯಲ್ಲಿಯೂ ಯಾವ ಜನಾಂಗದಲ್ಲಿಯೂ ಹಿಂದೆಂದಿಗೂ ಮಾಡದಿರುವಂಥ ಅದ್ಭುತಗಳನ್ನು ನಿನ್ನ ಎಲ್ಲಾ ಜನರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವೆಯೋ ಆ ಜನರೂ ಯೆಹೋವ ದೇವರ ಕಾರ್ಯವನ್ನು ನೋಡುವರು ಏಕೆಂದರೆ ನಾನು ನಿಮಗೆ ಮಾಡುವಂಥದ್ದು ಭಯಂಕರವಾಗಿರುವುದು.


ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು?


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನುಷ್ಯನನ್ನು ಸೃಷ್ಟಿಸಿದೆನು. ನಾನೇ, ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು. ನಾನು ಅದರ ನಕ್ಷತ್ರಸೈನ್ಯಕ್ಕೆಲ್ಲಾ ಅಪ್ಪಣೆಕೊಟ್ಟೆನು.


“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು