Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:34 - ಕನ್ನಡ ಸಮಕಾಲಿಕ ಅನುವಾದ

34 ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:34
35 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಮ್ಮನ್ನು ತಮ್ಮ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ, ಸೂಚಕಕಾರ್ಯಗಳಿಂದಲೂ, ಅದ್ಭುತಗಳಿಂದಲೂ, ಈಜಿಪ್ಟಿನಿಂದ ಹೊರಗೆ ಬರಮಾಡಿ,


ನೀನು ಈಜಿಪ್ಟ್ ದೇಶದಲ್ಲಿ ದಾಸನಾಗಿದ್ದಿಯೆಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ಬಲವಾದ ಹಸ್ತದಿಂದಲೂ ಚಾಚಿದ ಭುಜದಿಂದಲೂ ಹೊರಗೆ ಬರಮಾಡಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಯೆಹೋವ ದೇವರು ನಿನಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾರೆ.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು.


ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.


ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


ಇಸ್ರಾಯೇಲರ ಮುಂದೆ ಮೋಶೆಯು ನಡೆಸಿದ ವಿಶೇಷವಾದ ಕಾರ್ಯಗಳನ್ನು ಮತ್ತು ಭುಜಪರಾಕ್ರಮವನ್ನು ಯಾರೂ ಎಂದೂ ತೋರಿಸಿರಲಿಲ್ಲ ಅಥವಾ ಮಾಡಿರಲ್ಲ.


ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.


ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.


ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು.


ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ನಿಮ್ಮ ಕಣ್ಣಾರೆ ನೋಡಿದ್ದೀರಿ.


ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.


ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.


ಅವನು ತನ್ನ ಜನರಿಗೆ, “ಇಸ್ರಾಯೇಲರು ನಮಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ಹೆಚ್ಚು ಬಲವುಳ್ಳವರಾಗಿದ್ದಾರೆ.


ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು.


ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.


ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರ ಶಿಕ್ಷಣವನ್ನು ಅನುಭವಿಸಿದ್ದು ನಿಮ್ಮ ಮಕ್ಕಳಲ್ಲ: ದೇವರ ಮಹತ್ವವನ್ನೂ, ಅವರ ಬಲವಾದ ಕೈಯನ್ನೂ, ಅವರು ಚಾಚಿದ ಭುಜವನ್ನೂ;


ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”


ಈ ಮಹಿಮೆಯ ಅರಸ ಯಾರು? ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ. ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ.


ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.


ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟ್ ದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು,” ಎಂದರು.


ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?


‘ನಾನು ಈಜಿಪ್ಟಿನವರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಮೇಲೆ ಹೊತ್ತು ಬರುವಂತೆ ನಿಮ್ಮನ್ನು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.


ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.


ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು.


ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು