ಧರ್ಮೋಪದೇಶಕಾಂಡ 4:36 - ಕನ್ನಡ ಸಮಕಾಲಿಕ ಅನುವಾದ36 ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು. ಅಧ್ಯಾಯವನ್ನು ನೋಡಿ |