ಧರ್ಮೋಪದೇಶಕಾಂಡ 4:38 - ಕನ್ನಡ ಸಮಕಾಲಿಕ ಅನುವಾದ38 ದೇವರು ನಿಮಗಿಂತ ದೊಡ್ಡದಾದ, ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ನಿಮ್ಮ ಮುಂದೆ ಓಡಿಸಿ, ನಿಮ್ಮನ್ನು ಅವರ ದೇಶದೊಳಗೆ ಬರಮಾಡಿ, ಈ ದಿನ ನೀವು ಇರುವಂತೆ ನಿಮಗೆ ಅವರ ದೇಶವನ್ನು ಬಳುವಳಿಯಾಗಿ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಈಗ ನಮಗೆ ತಿಳಿದಿರುವಂತೆ ನಿಮಗಿಂತ ದೊಡ್ಡವೂ ಬಲಿಷ್ಠವೂ ಆದ ಜನಾಂಗಗಳನ್ನು ಹೊರಡಿಸಿ ಅವರ ನಾಡಲ್ಲೆ ನಿಮ್ಮನ್ನು ಸೇರಿಸಿ, ಆ ನಾಡನ್ನು ನಿಮಗೇ ಸ್ವಂತ ನಾಡನ್ನಾಗಿ ಕೊಡಲು ಸಂಕಲ್ಪಿಸಿದ್ದಾರೆ. ತಾವೇ ನಿಮ್ಮೊಂದಿಗಿದ್ದು, ತಮ್ಮ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆದುತಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಈಗ ನಿಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲೂ ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಲೂಬೇಕೆಂದು ಸಂಕಲ್ಪಿಸಿ ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶವನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿ |