ಧರ್ಮೋಪದೇಶಕಾಂಡ 4:39 - ಕನ್ನಡ ಸಮಕಾಲಿಕ ಅನುವಾದ39 ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನೀವು ಇದನ್ನೆಲ್ಲಾ ಆಲೋಚಿಸಿ, ಮೇಲೆ ಆಕಾಶದಲ್ಲಾಗಲಿ, ಕೆಳಗೆ ಭೂಮಿಯಲ್ಲಾಗಲಿ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಭೂವಿುಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 “ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.