ಧರ್ಮೋಪದೇಶಕಾಂಡ 4:42 - ಕನ್ನಡ ಸಮಕಾಲಿಕ ಅನುವಾದ42 ಯಾವ ಹಗೆಯಿಲ್ಲದೆ ತನ್ನ ನೆರೆಯವನನ್ನು ಕೈತಪ್ಪಿ ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳುವಂತೆ ಆ ನಗರಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಪೂರ್ವಕಲ್ಪಿತ ಯಾವ ದ್ವೇಷವೂ ಇಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ನಗರಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಮೊದಲು ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಯಾವನಾದರೂ ಒಬ್ಬ ಮನುಷ್ಯನನ್ನು ಉದ್ದೇಶವಿಲ್ಲದೆ ಆಕಸ್ಮಿಕವಾಗಿ ಕೊಂದರೆ ಅವನು ಈ ಮೂರು ನಗರಗಳಲ್ಲಿ ಯಾವುದಾದರೊಂದರಲ್ಲಿ ಆಶ್ರಯ ತೆಗೆದುಕೊಂಡಲ್ಲಿ ಅವನು ಮರಣದಂಡನೆಯಿಂದ ಪಾರಾಗುವನು ಅಂದರೆ ಅವನು ಕೊಲೆಯಾದವನನ್ನು ದ್ವೇಷಿಸದೆ ಇದ್ದಲ್ಲಿ ಮತ್ತು ಅವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲದಿದ್ದಲ್ಲಿ ಕೊಲೆಗಾರನು ಆ ನಗರದಲ್ಲಿ ಸುರಕ್ಷಿತನಾಗಿರುವನು. ಅಧ್ಯಾಯವನ್ನು ನೋಡಿ |