Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:5 - ಕನ್ನಡ ಸಮಕಾಲಿಕ ಅನುವಾದ

5 ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:5
24 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


“ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.


ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕಲಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಅವರು ಮಾಡಬೇಕಾದ ಕೆಲಸವನ್ನೂ ಅವರಿಗೆ ತೋರಿಸಬೇಕು.


ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.


ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.


ಆದರೆ ನಿಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾದ ನೀವೆಲ್ಲರು ಇಂದಿನವರೆಗೆ ಬದುಕಿದ್ದೀರಿ.


ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ. ಈವರೆಗೂ ನಿಮ್ಮ ಅದ್ಭುತಕಾರ್ಯಗಳನ್ನು ಘೋಷಿಸುತ್ತಿದ್ದೇನೆ.


“ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.


ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ.


ಹೀಗಿರುವುದರಿಂದ ನಾನು ಈ ಹೊತ್ತು ನಿಮಗೆ ಕೊಡುವ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನು ಕೈಗೊಳ್ಳಬೇಕು.


ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ.


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು.


ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ.


ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು