ಧರ್ಮೋಪದೇಶಕಾಂಡ 5:1 - ಕನ್ನಡ ಸಮಕಾಲಿಕ ಅನುವಾದ1 ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಇಸ್ರಾಯೇಲ್ಯರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ. ಅಧ್ಯಾಯವನ್ನು ನೋಡಿ |
ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.