Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಎತ್ತೂ, ನಿನ್ನ ಕತ್ತೆಯೂ, ನಿನ್ನ ಎಲ್ಲಾ ಪಶುಗಳೂ, ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು ಹೆಣ್ಣುಮಕ್ಕಳು ಗಂಡಾಳು ಹೆಣ್ಣಾಳು ಎತ್ತು ಕತ್ತೆ ಪಶುಗಳು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:14
13 ತಿಳಿವುಗಳ ಹೋಲಿಕೆ  

ಪವಿತ್ರ ವೇದದ ಯಾವುದೋ ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು, “ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂತಲೂ,


ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


“ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.


ಆಗ ನಾನು ಅವರನ್ನು ಗದರಿಸಿ ಅವರಿಗೆ, “ನೀವು ಕೋಟೆಯ ಗೋಡೆಯ ಹೊರಗೆ ಏಕೆ ಇಳುಕೊಂಡಿದ್ದೀರಿ? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮನ್ನು ಸೆರೆಗೆ ಹಾಕುವೆನು,” ಎಂದೆನು. ಆ ದಿನದಿಂದ ಅವರು ಸಬ್ಬತ್ ದಿನದಲ್ಲಿ ಬರಲೇ ಇಲ್ಲ.


ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು.


ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.


ಅನಂತರ ಯೇಸು ಅವರಿಗೆ, “ಮನುಷ್ಯನು ಸಬ್ಬತ್ ದಿನಕ್ಕಾಗಲಿ ಅಲ್ಲ, ಸಬ್ಬತ್ ದಿನವು ಮನುಷ್ಯನಿಗಾಗಿ ಮಾಡಲಾಯಿತು.


ಅವರು ಮನೆಗೆ ಹಿಂತಿರುಗಿ ಪರಿಮಳ ದ್ರವ್ಯವನ್ನೂ ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡರು; ಆದರೆ ಮೋಶೆಯ ಆಜ್ಞಾನುಸಾರವಾಗಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರು.


“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.


ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.


ಇದಲ್ಲದೆ ಮೀನುಗಳನ್ನೂ, ಎಲ್ಲಾ ಸರಕುಗಳನ್ನೂ ತೆಗೆದುಕೊಂಡು ಬಂದು ಸಬ್ಬತ್ ದಿನದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ಟೈರಿನವರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು